ಸಿಎಂ ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”: ಡಿಕೆಶಿ ಸ್ಫೋಟಕ ಹೇಳಿಕೆ
ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಚರ್ಚೆ: ಡಿ.ಕೆ. ಶಿವಕುಮಾರ್‌ರ “ರಹಸ್ಯ ಒಪ್ಪಂದ” ಹೇಳಿಕೆಯಿಂದ ರಾಜಕೀಯ ತಾಪ ಏರಿಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ನಂತರ ಮುಖ್ಯಮಂತ್ರಿ ಹುದ್ದೆಯ ಸುತ್ತಲೂ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೀಡಿದ ಇತ್ತೀಚಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿದಂತೆ ಪರಿಣಮಿಸಿದೆ. “ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡಲು ಬಯಸುವುದಿಲ್ಲ. ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ…
