ganga kalyan yojana 2025: ಉಚಿತ ಬೋರ್ವೆಲ್ ಕೊರಿಸಲು ಗಂಗಾ ಕಲ್ಯಾಣ ಯೋಜನೆಯ ಮೂಲಕ ಅರ್ಜಿ ಆಹ್ವಾನ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

ganga kalyan yojana 2025: ಉಚಿತ ಬೋರ್ವೆಲ್ ಕೊರಿಸಲು ಗಂಗಾ ಕಲ್ಯಾಣ ಯೋಜನೆಯ ಮೂಲಕ ಅರ್ಜಿ ಆಹ್ವಾನ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ ಕರ್ನಾಟಕದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಇದೀಗ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಇದೀಗ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ರೈತರು ಬೇಗ ಅರ್ಜಿ ಸಲ್ಲಿಸಿ ಈ ಒಂದು ಯೋಜನೆಯ ಲಾಭ ಪಡೆಯಿರಿ.! ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ವಿವಿಧ ನಿಗಮಗಳ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರಿಸಲು ಆರ್ಥಿಕ ನೆರವು ಹಾಗೂ ಉಚಿತ ವಿದ್ಯುತ್ ಸಂಪರ್ಕ ಈ ಒಂದು ಯೋಜನೆ ಅಡಿಯಲ್ಲಿ ಕಲ್ಪಿಸಲಾಗುತ್ತದೆ

WhatsApp Group Join Now
Telegram Group Join Now       

ಆದ್ದರಿಂದ ನಾವು ಈ ಒಂದು ಲೇಖನೆಯ ಮೂಲಕ ಪ್ರಸ್ತುತ 2025 ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಯಾವ ರೈತರು ಅರ್ಜಿ ಸಲ್ಲಿಸಬಹುದು ಹಾಗೂ ಯಾವ ನಿಗಮದಿಂದ ಇದೀಗ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

 

ಗಂಗಾ ಕಲ್ಯಾಣ ಯೋಜನೆ (ganga kalyan yojana 2025)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ರೈತರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ರೈತರು ತಮ್ಮ ಜಮೀನಿನಲ್ಲಿ ನೀರಾವರಿ ಸೌಲಭ್ಯಕ್ಕಾಗಿ ಬೋರ್ವೆಲ್ ಕೊರಿಸಲು ರಾಜ್ಯ ಸರ್ಕಾರ ಕಡೆಯಿಂದ ಆರ್ಥಿಕ ಸಹಾಯ ಧನ ನೀಡುವ ಉದ್ದೇಶದಿಂದ ನಮ್ಮ ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತರಲಾಯಿತು ಮತ್ತು ಈ ಒಂದು ಯೋಜನೆ ಅಡಿಯಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅಥವಾ ನಿಗಮಗಳ ಅಡಿಯಲ್ಲಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೋರ್ವೆಲ್ ಕೋರಿಸಲು ರಾಜ್ಯ ಸರ್ಕಾರ ಆರ್ಥಿಕ ಸಹಾಯಧನ ನೀಡುತ್ತಿದೆ

ganga kalyan yojana 2025
ganga kalyan yojana 2025

 

ಆದ್ದರಿಂದ ನಮ್ಮ ರಾಜ್ಯದಲ್ಲಿ ಇರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತವಾಗಿ ಕೊಳವೆ ಬಾವಿ ಕೋರಿಸಲು ಆರ್ಥಿಕ ಸಹಾಯ ಧನ ಪಡೆಯಬಹುದು ಹಾಗಾಗಿ ಆದಷ್ಟು ರೈತರು 30 ಜೂನ್ 2025 ರ ಒಳಗಡೆ ಗಂಗಾ ಕಲ್ಯಾಣ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಹಾಗಾಗಿ ನಾವು ಪ್ರಸ್ತುತ ಈ ಒಂದು ಯೋಜನೆ ಅಡಿಯಲ್ಲಿ ಯಾವ ಜಿಲ್ಲೆಯ ರೈತರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿ ತಿಳಿಯೋಣ ಹಾಗೂ ಎಷ್ಟು ಸಬ್ಸಿಡಿ ಸಿಗುತ್ತೆ ಎಂದು ವಿವರ ಪಡೆಯೋಣ

 

WhatsApp Group Join Now
Telegram Group Join Now       

ಎಷ್ಟು ಸಬ್ಸಿಡಿ ಹಣ ಸಿಗುತ್ತೆ (ganga kalyan yojana 2025).?

ಸ್ನೇಹಿತರೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ನಮ್ಮ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಹಾಸನ, ಚಿಕ್ಕಮಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ರೈತರು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಅಂತ ರೈತರು ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು ಹಾಗೂ ಉಳಿದ ಜಿಲ್ಲೆಗಳಲ್ಲಿ ಇರುವಂತ ಇರುವಂತ ರೈತರು ಕನಿಷ್ಠ ಅರ್ಜಿ ಸಲ್ಲಿಸಲು ಎರಡು ಎಕರೆ ಜಮೀನು ಹೊಂದಿರಬೇಕು ಹಾಗೂ ಗರಿಷ್ಠ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

ಗಂಗಾ ಕಲ್ಯಾಣಿ ಯೋಜನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ್, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿದಂತ ರೈತರಿಗೆ ಕೊಳವೆ ಬಾವಿ ಕೋರಿಸಲು ಈ ಒಂದು ಯೋಜನೆ ಅಡಿಯಲ್ಲಿ ಗರಿಷ್ಠ 4.25 ಲಕ್ಷ ವರೆಗೆ ಆರ್ಥಿಕ ನೆರವು ಅಥವಾ ಸಹಾಯಧನ ಸಿಗುತ್ತದೆ ಮತ್ತು ಕೊಳವೆ ಬಾವಿ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ಐವತ್ತು ಸಾವಿರ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ

ನಮ್ಮ ಕರ್ನಾಟಕದಲ್ಲಿ ಇರುವಂತ ಉಳಿದ ಜಿಲ್ಲೆಗಳಲ್ಲಿ ಇರುವ ರೈತರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ಗರಿಷ್ಠ 3.25 ಲಕ್ಷ ರೂಪಾಯಿವರೆಗೆ ಈ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಬ್ಸಿಡಿ ಸಹಾಯಧನ ಸಿಗುತ್ತದೆ ಮತ್ತು ನೀರಾವರಿ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ಗರಿಷ್ಠ 50 ಸಾವಿರ ವರೆಗೆ ಸಾಲವನ್ನು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ 4% ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ

 

ಗಂಗಾ ಕಲ್ಯಾಣ ಯೋಜನೆಗೆ (ganga kalyan yojana 2025) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಕಡ್ಡಾಯವಾಗಿ 1.20 ಲಕ್ಷ ರೂಪಾಯಿಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು
  • ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ತಮ್ಮ ಜಾತಿಗೆ ಸಂಬಂಧಿಸಿದ ಅಥವಾ ತಮ್ಮ ನಿಗಮಗಳ ವ್ಯಾಪ್ತಿಗೆ ಸೇರಿರಬೇಕು
  • ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಒಂದು ಎಕರೆಯಿಂದ ಗರಿಷ್ಠ ಐದು ಎಕರೆಯ ಒಳಗಡೆ ಜಮೀನು ಹೊಂದಿದಂತವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಗಂಗಾ ಕಲ್ಯಾಣಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ರೈತರು ಈ ಹಿಂದೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆದಿರಬಾರದು & ಭೂಮಿಯಲ್ಲಿ ಯಾವುದೇ ನೀರಾವರಿ ಸೌಲಭ್ಯ ಹೊಂದಿರಬಾರದು
  • ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ರೈತರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಜೋಡಣೆ ಆಗಿರಬೇಕು
  • ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ರೈತರು ಕಡ್ಡಾಯವಾಗಿ ತಮ್ಮ ಜಮೀನಿಗೆ ಸಂಬಂಧಿಸಿದ FI ಐಡಿ ಒಂದಿರಬೇಕು

 

ಯಾವ ನಿಗಮಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವಿವಿಧ ಜಾತಿಗಳು ಹಾಗೂ ಹಿಂದುಳಿದ ವರ್ಗ ಮತ್ತು ಸಣ್ಣ ಅತಿ ಸಣ್ಣ ರೈತರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಅರ್ಜಿದಾರರು ತಮ್ಮ ಜಾತಿಗೆ ಸಂಬಂಧಿಸಿದ ನಿಗಮಗಳ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ನೀಡಲಾಗಿದೆ

  • ಕರ್ನಾಟಕ ಉಪ್ಪರ್ ಅಭಿವೃದ್ಧಿ ನಿಗಮ
  • ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
  • ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
  • ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
  • ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
  • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  • ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ
  • ಕರ್ನಾಟಕ ಅಲೆಮಾರಿ ಮತ್ತು ಅಲೆ ಅಲೆಮಾರಿ ಅಭಿವೃದ್ಧಿ ನಿಗಮ
  • ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
  • ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ

 

ಗಂಗಾ ಕಲ್ಯಾಣ ಯೋಜನೆಗೆ (ganga kalyan yojana 2025) ಅರ್ಜಿ ಸಲ್ಲಿಸುವುದು ಹೇಗೆ..?

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತ ರೈತರು ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕರ್ನಾಟಕ ಸೇವಾ ಸಿಂಧು ಪೋರ್ಟಲ್ ಮೂಲಕ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/06/2025

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನೀವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ್ ಒನ್, ಮುಂತಾದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹಾಗೂ ಇದೇ ರೀತಿ ಕೃಷಿಗೆ ಸಂಬಂಧಿಸಿದ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

Student Bus Pass 2025: ವಿದ್ಯಾರ್ಥಿಗಳಿಗೆ KSRTC ವತಿಯಿಂದ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ, ಇಲ್ಲಿದೆ ವಿವರ

1 thought on “ganga kalyan yojana 2025: ಉಚಿತ ಬೋರ್ವೆಲ್ ಕೊರಿಸಲು ಗಂಗಾ ಕಲ್ಯಾಣ ಯೋಜನೆಯ ಮೂಲಕ ಅರ್ಜಿ ಆಹ್ವಾನ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ”

Leave a Comment

?> ?>