ಮದುವೆಗೆ ಒಪ್ಪದಿದ್ದಕ್ಕೆ ನೇಹಾನ ಕೊಲೆ ? ನೇಹಾ ತಂದೆ ಹೇಳಿದ್ದೇನು..? FIR ನಲ್ಲಿ ಏನಿದೆ..?

ಹುಬ್ಬಳ್ಳಿ:- ಇಲ್ಲಿನ BVB ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು FIR ದಾಖಲಿಸಲಾಗಿದೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು FIR ನಲ್ಲಿ ದಾಖಲಿಸಲಾಗಿದೆ

ಇವತ್ತು ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಈ 14 ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗಿದೆ

FIR ನಲ್ಲಿ ಏನಿದೆ..?

ನೇಹಾ ತಂದೆ ಹೇಳಿರುವಂತೆ, ಫಯಾಜ್ ಮತ್ತು ನಮ್ಮ ಮಗಳ ಸಹಪಾಠಿ ಹಾಗೂ ಒಂದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ನನ್ನ ಮಗಳನ್ನು ಪ್ರೀತಿ ಮಾಡುವಂತೆ ಯಾವಾಗಲೂ ಬಲವಂತ ಮಾಡುತ್ತಿದ್ದ. ಇಷ್ಟೇ ಅಲ್ಲದೇ ಮದುವೆ ಮಾಡಿಕೊಡುವಂತೆ ನಮ್ಮ ಕುಟುಂಬಸ್ಥರಿಗೂ ಪದೇ ಪದೇ ಫೊನ್ ಕರೆ ಮಾಡಿ ಕೇಳುತ್ತಿದ್ದ. ಆದ್ರೆ ನಮ್ಮ ಮನೆಯವರು ಆತನಿಗೆ ನಮ್ಮ ಮಗಳು ನಿನ್ನನ್ನು ಇಷ್ಟಪಡುತ್ತಿಲ್ಲ. ಅವಳು ಇನ್ನು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕು ಅಂದು ಕೊಂಡಿದ್ದಾಳೆ ಅಂತ ಯಾವಾಗಲೂ ಹೇಳುತ್ತಲೇ ಇದ್ದರು ಇದರಿಂದ ಹತಾಷೆಗೊಂಡ ಫಯಾಜ್ ಇದೇ ತಿಂಗಳ ಅಂದರೆ ಏಪ್ರಿಲ್ 18 ರಂದು ಹತ್ಯೆ ಮಾಡಿದ್ದಾನೆ ಎಂದು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

 

ನೇಹಾ ತಂದೆಯ ಹೇಳಿಕೆ ?

WhatsApp Group Join Now
Telegram Group Join Now       

ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ವಿಚಾರಣೆಯ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ

ಈ ಕುರಿತು ಮಾತನಾಡಿದ ಅವರು, ಘಟನೆ ನಡೆದ ಮೊದಲ ದಿನ ನನ್ನ ಜೊತೆಗೆ ಇದ್ದವರು, ಇವತ್ತು ನನ್ನ ಬೆನ್ನಿಗೆ ನಿಂತಿಲ್ಲ, ಘಟನೆ ವೈಯಕ್ತಿಕ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವರ ವಿರುದ್ಧ ಅವರು ಇವತ್ತು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಹೇಳಬಹುದು

ನೇಹಾ ಹತ್ಯೆಯಲ್ಲಿ ಫಯಾಜ್ ಒಬ್ಬನೇ ಇಲ್ಲ, ಈತನ ಜೊತೆಗೆ ಅಥವಾ ಹಿಂದೆ ನಾಲ್ಕು ಜನರಿದ್ದಾರೆ. ಅವರ ಹೆಸರನ್ನು ಪೊಲೀಸರಿಗೆ ಕೊಟ್ಟಿದ್ದೇನೆ. ಪೋಲಿಸರಿಗೆ ಈ ಘಟನೆ ಕುರಿತು ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದೇನೆ.

Instagram ನನ್ನ ಮಗಳ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ಮತ್ತು ಅವಳ ಬಗ್ಗೆ ಕೆಟ್ಟದಾಗಿ ಹಾಗೂ ಸಮಾಜದಲ್ಲಿ ತಪ್ಪು ತಿಳುವಳಿಕೆ ಬರುವಂತೆ ವಿಷಯಗಳ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಆರೋಪಿ ಜೈಲಿನಲ್ಲಿದ್ದರು ಕೂಡ ಖಾತೆಗಾಳನ್ನು ಯಾರು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ಪತ್ತೆ ಹಚ್ಚಬೇಕು ಎಂದು ವಿನಂತಿ ಮಾಡಿಕೊಂಡಿದ್ದೇನೆ. ಈ ಕುರಿತು ವಕೀಲರೊಂದಿಗೆ ಕೂಡ ಮಾತನಾಡಿದ್ದೇನೆ.‌ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ

Leave a comment